Akshaya Sharadhotsava
Darbe Salon
Mahalingeshwara Car Air Condition
New Dot Dress Mart

ವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Modi) ಅವರಿಂದು (ಜೂ.10) ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ ದಾಖಲೆ ಬರೆದಿದ್ದಾರೆ. ಈ ಮೂಲಕ ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ (Jawaharlal nehru) ಅವರ 4,398 ದಿನಗಳ ದಾಖಲೆಯನ್ನ ಮುರಿದು 4,399 ದಿನಗಳ ನಿರಂತರ ಸೇವೆಯ ಮೈಲುಗಲ್ಲು ತಲುಪಿದ್ದಾರೆ.

Out Look Fashion

014ರ ಮೇ 26ರಂದು ಮೊದಲ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮೋದಿ ಅವರು ಇಂದಿಗೆ 4,399 ದಿನಗಳ ನಿರಂತರ ಅಧಿಕಾರಾವಧಿಯನ್ನ ಪೂರೈಸಿದ್ದಾರೆ. ಇದರೊಂದಿಗೆ ಅವರು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಅತ್ಯಂತ ದೀರ್ಘಕಾಲ ಸೇವೆ ಸಲ್ಲಿಸಿದ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ನೆಹರೂ ಅವರು 1952ರ ಮೇ 13ರಂದು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿ, 1964ರ ಮೇ 27ರವರೆಗೆ ಒಟ್ಟು 4,398 ದಿನಗಳ ಕಾಲ ನಿರಂತರವಾಗಿ ಸೇವೆ ಸಲ್ಲಿಸಿದ್ದರು. ಈ ದಾಖಲೆಯು ಕಳೆದ 64 ವರ್ಷಗಳಿಂದಲೂ ಅಚ್ಚಳಿಯದೇ ಉಳಿದಿತ್ತು.

Jaya Refrigeration and Air Condition

ಇದಕ್ಕೂ ಮುನ್ನ ಮೋದಿ ಅವರು 2025ರ ಜುಲೈ 25ರಂದು ಮತ್ತೊಂದು ಮೈಲುಗಲ್ಲು ದಾಟಿದ್ದರು. ಆ ದಿನ ಅವರು 4,077 ದಿನಗಳೊಂದಿಗೆ ಮೂರನೇ ಅತ್ಯಂತ ದೀರ್ಘಕಾಲ ಸೇವೆ ಸಲ್ಲಿಸಿದ ಪ್ರಧಾನಿ ಇಂದಿರಾ ಗಾಂಧಿ (Indira Gandhi) ಅವರ ದಾಖಲೆಯನ್ನು ಹಿಂದಿಕ್ಕಿದ್ದರು. ಇಂದಿರಾ ಗಾಂಧಿ ಅವರು 1966ರ ಜನವರಿ 24ರಿಂದ 1977ರ ಮಾರ್ಚ್ 24ರವರೆಗೆ ಸುಮಾರು 11 ವರ್ಷ 2 ತಿಂಗಳ ಕಾಲ (4,077 ದಿನ) ನಿರಂತರ ಅಧಿಕಾರ ನಡೆಸಿದ್ದರು.