Akshaya Sharadhotsava
Darbe Salon
Mahalingeshwara Car Air Condition
New Dot Dress Mart
Screenshot

ಪುತ್ತೂರು: ಪುತ್ತೂರು-ಉಪ್ಪಿನಂಗಡಿ ರಸ್ತೆಯ ಹಾರಾಡಿ ರೈಲ್ವೆ ಸೇತುವೆಯ ಕೆಳಭಾಗದಲ್ಲಿ ಕಾಂಕ್ರೀಟೀಕರಣ ಕಾಮಗಾರಿ ನಡೆಯಲಿರುವ ಹಿನ್ನೆಲೆಯಲ್ಲಿ, ಜೂನ್ 15 ರಿಂದ ಜುಲೈ 15 ರವರೆಗೆ ಒಂದು ತಿಂಗಳ ಕಾಲ ಈ ರಸ್ತೆಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿ ಲೋಕೋಪಯೋಗಿ ಇಲಾಖೆ ಆದೇಶಿಸಿದೆ.

Out Look Fashion

ಹಾರಾಡಿ ರೈಲ್ವೆ ಸೇತುವೆಯ ಕೆಳಭಾಗದಲ್ಲಿ ರಸ್ತೆಯು ಅತ್ಯಂತ ಕಿರಿದಾಗಿದ್ದು, ಚತುಷ್ಪಥ ಕಾಂಕ್ರೀಟೀಕರಣ ಕಾಮಗಾರಿ ನಡೆಯುವ ಸಂದರ್ಭದಲ್ಲಿ ದ್ವಿಮುಖ ವಾಹನ ಸಂಚಾರ ಅಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕಾಮಗಾರಿ ಸುಗಮವಾಗಿ ನಡೆಯಲು ಒಂದು ತಿಂಗಳ ಕಾಲ ವಾಹನ ಸಂಚಾರವನ್ನು ನಿರ್ಬಂಧಿಸಿ, ಪರ್ಯಾಯ ಮಾರ್ಗಗಳನ್ನು ನಿಗದಿಪಡಿಸಲಾಗಿದೆ

Jaya Refrigeration and Air Condition

ಪರ್ಯಾಯ ಮಾರ್ಗಗಳ ವಿವರ: ಸಾರ್ವಜನಿಕರು ಹಾಗೂ ವಾಹನ ಸವಾರರು ಈ ಕೆಳಗಿನ ಪರ್ಯಾಯ ರಸ್ತೆಗಳನ್ನು ಬಳಸುವಂತೆ ಸೂಚಿಸಲಾಗಿದೆ: ಪುತ್ತೂರಿನಿಂದ ಉಪ್ಪಿನಂಗಡಿ ಕಡೆಗೆ ಹೋಗುವ ವಾಹನಗಳು: ಪುತ್ತೂರು ಖಾಸಗಿ ಬಸ್ ನಿಲ್ದಾಣದಿಂದ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯ ಮೂಲಕ ಕೋಟೆಚಾ ಹಾಲ್ ಮುಖಾಂತರ ಉಪ್ಪಿನಂಗಡಿ ರಸ್ತೆಯನ್ನು ಸೇರಬೇಕು.

ಉಪ್ಪಿನಂಗಡಿಯಿಂದ ಪುತ್ತೂರು ಕಡೆಗೆ ಬರುವ ವಾಹನಗಳು: ಉಪ್ಪಿನಂಗಡಿ ಕಡೆಯಿಂದ ಬರುವ ವಾಹನಗಳು ಕೋಟೆಚಾ ಹಾಲ್ ಮೂಲಕ ಎ.ಪಿ.ಎಂ.ಸಿ. ರಸ್ತೆಯಾಗಿ ಪುತ್ತೂರು ಮುಖ್ಯ ರಸ್ತೆಯನ್ನು ಸೇರಬಹುದು.