



ಬಂಟ್ವಾಳ: NDPS ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದೇ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 309/2017ರಲ್ಲಿ, NDPS ಕಾಯ್ದೆಯ ಕಲಂ 8(c) ಹಾಗೂ 27(B) ಅಡಿಯಲ್ಲಿ ದಾಖಲಾಗಿದ್ದ ಪ್ರಕರಣದ ಆರೋಪಿ, ಬಂಟ್ವಾಳ ತಾಲೂಕಿನ ಕಾವಳಪಡೂರು ನಿವಾಸಿ ನಜೀರ್ ಅಹ್ಮದ್ (41) ಎಂಬಾತ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದನು.


ಆರೋಪಿಯ ಇರುವಿಕೆಯ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ, ಜೂನ್ 12, 2026ರಂದು ಬಂಟ್ವಾಳ ಗ್ರಾಮಾಂತರ ಠಾಣೆಯ ಸಿಬ್ಬಂದಿಗಳಾದ ಪಿಸಿ 2456 ಶ್ರೀಕಾಂತ್ ಹಾಗೂ ಪಿಸಿ 2468 ಅರುಣ್ ಕಾರ್ಯಾಚರಣೆ ನಡೆಸಿ, ವಗ್ಗ ಪ್ರದೇಶದಲ್ಲಿ ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ.
ಬಳಿಕ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
ಬಂಟ್ವಾಳ ಗ್ರಾಮಾಂತರ ಪೊಲೀಸರ ಈ ಕಾರ್ಯಾಚರಣೆಯಿಂದ ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಪ್ರಕರಣದ ವಿಚಾರಣೆಗೆ ಮತ್ತೊಮ್ಮೆ ಚುರುಕು ದೊರೆತಿದೆ.
