Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Out Look Fashion

ಪುತ್ತೂರು ನಗರ ಪೊಲೀಸ್ ಠಾಣೆಯ ಅ.ಕ್ರ.100/2015 ಪ್ರಕರಣದಲ್ಲಿ ಕಲಂ 447, 427, 504 ಹಾಗೂ 506 ಅಡಿಯಲ್ಲಿ ಆರೋಪಿಯಾಗಿದ್ದ ಸ್ವರೂಪ್ ಅಲಿಯಾಸ್ ಸ್ವರೂಪ್ ಅಮೀನ್ ಎಂಬಾತನು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದನು.

Jaya Refrigeration and Air Condition
Screenshot

ಆರೋಪಿಯ ವಿರುದ್ಧ ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿದ್ದು, ಆತನ ಪತ್ತೆಗಾಗಿ ಪೊಲೀಸರು ನಿರಂತರ ಶೋಧ ಕಾರ್ಯ ನಡೆಸುತ್ತಿದ್ದರು.

ಇದೀಗ ಕೇರಳ ರಾಜ್ಯದ ಮಂಜೇಶ್ವರ ತಾಲೂಕಿನ ಪಾವೂರು ಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣೆಯ ಪೊಲೀಸರು ಪತ್ತೆಹಚ್ಚಿ ದಸ್ತಗಿರಿ ಮಾಡಿದ್ದಾರೆ.

ಬಂಧಿತ ಆರೋಪಿಯನ್ನು ಬಳಿಕ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಪುತ್ತೂರು ನಗರ ಠಾಣೆ ಪೊಲೀಸರ ಈ ಕಾರ್ಯಾಚರಣೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.

ಇಂತಹ ಇನ್ನಷ್ಟು ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಚಾನೆಲ್‌ ಅನ್ನು ಸಬ್‌ಸ್ಕ್ರೈಬ್ ಮಾಡಿ. ಧನ್ಯವಾದಗಳು.