



ನೂಜಿ: ಭಾರತೀಯ ಸೇನೆಯ ಅಗ್ನಿವೀರ್ ಹುದ್ದೆಗೆ ಆಯ್ಕೆಯಾಗಿರುವ ಪ್ರಫುಲ್ ಅವರಿಗೆ ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲ ವತಿಯಿಂದ ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು.


ಸುಬ್ರಹ್ಮಣ್ಯ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ರೆಂಜಿಲಾಡಿ ಗ್ರಾಮದ ಪದ್ಮನಾಭ ಹಾಗೂ ರಜಿತ ದಂಪತಿಯ ಪುತ್ರನಾದ ಪ್ರಫುಲ್, ದೇಶಸೇವೆಯ ಕನಸಿನೊಂದಿಗೆ ಭಾರತೀಯ ಸೇನೆಗೆ ಸೇರ್ಪಡೆಯಾಗುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಮುಖಂಡರು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಪ್ರಫುಲ್ ಅವರ ಸಾಧನೆ ಯುವಜನತೆಗೆ ಪ್ರೇರಣೆಯಾಗಿದ್ದು, ದೇಶಸೇವೆಯ ಮೂಲಕ ಇನ್ನಷ್ಟು ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದರು.
ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲ ವತಿಯಿಂದ ಪ್ರಫುಲ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಬಿಜೆಪಿ ಸುಬ್ರಹ್ಮಣ್ಯ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮಧುಸೂದನ್ ಕೊಂಬಾರು, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಕೃಷ್ಣ ಎಂ.ಆರ್. ಕಡಬ, ಮಂಡಲ ಉಪಾಧ್ಯಕ್ಷರಾದ ಸುಪ್ರೀತ್ ಅಮೈ ಹಾಗೂ ದಿಲೀಪ್ ಉಪ್ಪಳ್ಳಿಕೆ, ಕಾರ್ಯಕಾರಿಣಿ ಸದಸ್ಯ ಯತೀಶ್, ಮಾಜಿ ನೂಜಿಬಾಳ್ತಿಲ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಚಂದ್ರಶೇಖರ ನೂಜಿ, ಪ್ರಮುಖರಾದ ಉಮೇಶ್ ಗೌಡ, ವಿನಯಕುಮಾರಿ, ಉಮೇಶ್ ಶೆಟ್ಟಿ ಸಾಯಿರಾಮ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
ದೇಶಸೇವೆಯ ಕನಸಿನೊಂದಿಗೆ ಅಗ್ನಿವೀರ್‌ಗೆ ಆಯ್ಕೆಯಾಗಿರುವ ಪ್ರಫುಲ್ ಅವರಿಗೆ ನಮ್ಮ ಕಡೆಯಿಂದಲೂ ಅಭಿನಂದನೆಗಳು.
