



ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಸಮಗ್ರ ಅಭಿವೃದ್ಧಿ ಕುರಿತ ಸಾರ್ವಜನಿಕ ಪ್ರಶ್ನೆ-ಚಿಂತನೆ ಕಾರ್ಯಕ್ರಮ ಜೂನ್ 20ರಂದು ನಡೆಯಲಿದೆ. ದೇವಸ್ಥಾನ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಭಿಪ್ರಾಯ, ಸಲಹೆ ಮತ್ತು ಪ್ರಶ್ನೆಗಳನ್ನು ಆಲಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಸಹಸ್ರಲಿಂಗೇಶ್ವರ ದೇವಸ್ಥಾನವನ್ನು ಪ್ರಮುಖ ಯಾತ್ರಾ ಕೇಂದ್ರವಾಗಿ ಅಭಿವೃದ್ಧಿಪಡಿಸುವ ಮಹತ್ವಾಕಾಂಕ್ಷೆಯ ಯೋಜನೆ ಈಗಾಗಲೇ ಚರ್ಚೆಯಲ್ಲಿದೆ.


ಜೂನ್ 20, ಶನಿವಾರ ಬೆಳಿಗ್ಗೆ 10 ಗಂಟೆಗೆ ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಪ್ರಶ್ನೆ-ಚಿಂತನೆ ಕಾರ್ಯಕ್ರಮ ನಡೆಯಲಿದೆ. ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ನಡೆಯುವ ಈ ಸಭೆಯಲ್ಲಿ ದೇವಸ್ಥಾನದ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ವಿಚಾರಗಳ ಕುರಿತು ಚರ್ಚೆ ನಡೆಯಲಿದ್ದು, ಭಕ್ತಾದಿಗಳು ಹಾಗೂ ಸಾರ್ವಜನಿಕರಿಂದ ನೇರವಾಗಿ ಸಲಹೆ ಮತ್ತು ಅಭಿಪ್ರಾಯಗಳನ್ನು ಸಂಗ್ರಹಿಸಲಾಗುತ್ತದೆ.

ಸಹಸ್ರಲಿಂಗೇಶ್ವರ ದೇವಸ್ಥಾನವನ್ನು ‘ದಕ್ಷಿಣ ಕಾಶಿ’ ಮಾದರಿಯ ಆಧ್ಯಾತ್ಮಿಕ ಹಾಗೂ ಪ್ರವಾಸೋದ್ಯಮ ಕೇಂದ್ರವಾಗಿ ರೂಪಿಸುವ ಉದ್ದೇಶದಿಂದ ಹಲವು ಅಭಿವೃದ್ಧಿ ಯೋಜನೆಗಳು ಈಗಾಗಲೇ ಪ್ರಸ್ತಾಪಗೊಂಡಿವೆ. ಯಾತ್ರಾರ್ಥಿಗಳಿಗೆ ಮೂಲಸೌಕರ್ಯ, ವಸತಿ, ಪಿಂಡಪ್ರಧಾನ ಸೌಲಭ್ಯ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಸರ್ಕಾರದ ಮಟ್ಟದಲ್ಲಿಯೂ ಚರ್ಚೆಗಳು ನಡೆದಿವೆ.ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಸಲಹೆಗಳನ್ನು ಪಡೆದು ಅಭಿವೃದ್ಧಿ ಯೋಜನೆಗೆ ಮತ್ತಷ್ಟು ರೂಪುರೇಷೆ ನೀಡುವ ಉದ್ದೇಶದಿಂದ ಈ ಪ್ರಶ್ನೆ-ಚಿಂತನೆ ಆಯೋಜಿಸಲಾಗಿದೆ.
ಎಲ್ಲಾ ಭಕ್ತಾದಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಮೂಲ್ಯ ಸಲಹೆಗಳನ್ನು ನೀಡಬೇಕು” ಎಂದು ಶಾಸಕ ಅಶೋಕ್ ಕುಮಾರ್ ರೈ ಮನವಿ ಮಾಡಿದ್ದಾರೆ.
